ಕೇಪು: ದ ಕ ಜಿ ಪಂ ಹಿ ಪ್ರಾ ಶಾಲೆ ಕೇಪು ಇಲ್ಲಿಯ ವಿದ್ಯಾರ್ಥಿನಿ ಗಾಯತ್ರಿ ಕೆ ಎಸ್ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಜರಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಲ್ಲಾಪು ನಿರಂಜನ ಮತ್ತು ಸುನಂದ ದಂಪತಿಯ ಪುತ್ರಿ. ಇವರು ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಶೆಟ್ಟಿ ಯವರಿಂದ ತರಬೇತಿ ಪಡೆಯುತ್ತಿದ್ದಾರೆ.

