ಬಂಟ್ವಾಳ: ಮನೆಯಿಂದ ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸು ಬರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಮೊಡಂಕಾಪು ನಿವಾಸಿ ಗಣೇಶ್ (47) ಎಂಬವರು ಮನೆಯಿಂದ ಕೆಲಸಕ್ಕ ಹೊರಟವರು ಕಾಣೆಯಾಗಿದ್ದಾರೆ ಎಂದು ಪತ್ನಿ ಶೋಭಾ ದೂರಿನಲ್ಲಿ ತಿಳಿಸಿದ್ದಾರೆ.
DSC_0527
ಗಣೇಶ್ ವ್ಥತ್ತಿಯಲ್ಲಿ ಚಾಲಕನಾಗಿದ್ದು ಅಮಲು ಪದಾರ್ಥ ಸೇವನೆ ಮಾಡುತ್ತಿದ್ದರು. ಇತ್ತೀಚೆಗೆ ಒಂದೂವರೆ ತಿಂಗಳಿನಿಂದ ಮಾನಸಿಕವಾಗಿ ನೊಂದವರಂತೆ ಇದ್ದರು. ಇವರ ಬಗ್ಗೆ ಸುಳಿವು ಕಂಡು ಬಂದಲ್ಲಿ ನಗರ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ .

By suddi9

Leave a Reply

Your email address will not be published. Required fields are marked *