ಮೂಡುಬಿದಿರೆ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಾತ್ರವಲ್ಲ, ಅವರು ದೊಡ್ಡವರಾದ ಮೇಲೆ ಅದನ್ನು ಮುಂದುವರಿಸಲು ಪ್ರೇರೆಪಿಸಬೇಕು. ಸಮಾಜದಲ್ಲಿರುವ ಪ್ರತಿಯೊಬ್ಬರು ತಮ್ಮದೇ ರೀತಿ ಸಾಧನೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.
6mood Canaraಜಿಲ್ಲಾ ರಾಜ್ಯೋತ್ಸವ ಪ್ರಶಸ್ತ್ರಿ ಪುರಸ್ಕ್ರತ ನಾರಾಯಣ ಪಿ.ಎಂ, ಪ್ರಗತಿಪರ ಕೃಷಿಕ ಸಂಪತ್ ಸಾಮ್ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕ್ರತ ಬಾಲಪ್ರತಿಭೆ ಪಂಚಮಿ ಮಾರೂರು ಅವರನ್ನು ಮಂಗಳೂರಿನ ಕೆನರಾ ಬಸ್ಸು ಮಾಲೀಕ ಸಂಘ ವತಿಯಿಂದ ಮೂಡುಬಿದಿರೆ ನಿಶ್ಮಿತಾ ಪಾರಡೈಸ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಅಭಿನಂದನಾ ಸಮಾರಂಭದ ಅತಿಥಿಯಾಗಿ ಮಾತನಾಡಿದರು.
ಮೀನುಗಾರಿಕ ಸಚಿವ ಕೆ.ಅಭಯಚಂದ್ರ ಜೈನ್, ಸಾರಿಗೆ ಉದ್ಯಮಿ ಎಂ.ಕೆ ರತ್ನಾಕರ ಮುಖ್ಯ ಅತಿಥಿಯಾಗಿದ್ದರು. ಮಂಗಳೂರು ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.
ಅಶೋಕ್ ಜೈನ್, ಸ್ವರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ನಿತೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. ಮೂಡುಬಿದಿರೆ ವಲಯದ ಕಾರ್ಯದರ್ಶಿ ಪ್ರಕಾಶ್ ಸಪಳಿಗ ವಂದಿಸಿದರು.

By Suddi9

Leave a Reply

Your email address will not be published. Required fields are marked *