ಉಡುಪಿ: ಕಾಪುವಿನ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿಟ್ಲದ ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಯುಕ್ತಾ ಡಿ ಎಂ. ಇವರು ಓರ್ವ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇವರು ವಿಟ್ಲ ಕಸ್ಬಾ ಗ್ರಾಮದ ಕಾನತ್ತಡ್ಕ ನಿವಾಸಿಗಳಾಗ ದಿನೇಶ್ ಎ ಮತ್ತು ಮಾಲತಿ ಕೆ ದಂಪತಿಯ ಪುತ್ರಿ
