ಬಂಟ್ವಾಳ:ಪ್ರಾಮಾಣಿಕ ಪಕ್ಷ ನಿಷ್ಠರಾಗಿ ಅಧಿಕಾರ ದಾಹವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಪ್ರತಾಪಚಂದ್ರ ಶೆಟ್ಟಿಯವರು ಪಕ್ಷದ ವರಿಷ್ಠರ ಮತ್ತು ಕಾರ್ಯಕರ್ತರ ಒಮ್ಮತದ ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸಿ ಆಯ್ಕೆ ಮಾಡುವ ಮೂಲಕ ಪಕ್ಷದ ಋಣ ತೀರಿಸುವ ಕಾರ್ಯವನ್ನು ಜನಪ್ರತಿನಿಧಿ ಮತದಾರರು ಮಾಡಬೇಕು.ಆ ಮೂಲಕ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬೇಕು ಎಂದು ರಮಾನಾಥ ರೈ ಅವರು ಹೇಳಿದರು.
ಅವರು ಡಿ.21 ರಂದು ಕಾವಳಮೂಡೂರು ಗ್ರಾಮದ ಕಾವಳಕಟ್ಟೆಯಲ್ಲಿ ನಡೆದ ಸರಪಾಡಿ ಜಿ.ಪಂ.ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಜನಪರ ಕಾರ್ಯಕ್ರಮಗಳಿಂದ ಕಾಂಗ್ರೆಸ್ ಸರಕಾರ ಸಮಗ್ರ ಅಭಿವೃದ್ಧಿ ಸಾಧಿಸಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಾಯಕತ್ವದ ಅವಕಾಶ ಕಾಂಗ್ರೆಸ್ ಪಕ್ಷ ನೀಡಿದೆ.ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿಮೀರಿ ಕರ್ತವ್ಯ ನಿರ್ವಹಿಸಿದ್ದು ಗ್ರಾಮ ಪಂಚಾಯತ್ಗಳನ್ನು ವಿಕೇಂದ್ರೀಕರಣ ನಡೆಸಿ ಶಕ್ತಿ ತುಂಬುವ ನಿಟ್ಟಿನಲ್ಲಿ ಅತಿ ಹೆಚ್ಚು ಗ್ರಾ.ಪಂ.ಗಳ ಸೇರ್ಪಡೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು 94 ಸಿ ಹಕ್ಕು ಪತ್ರ ನೀಡಿದ ಕ್ಷೇತ್ರ ಬಂಟ್ವಾಳವಾಗಿದೆ. ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಿಂದ ನೀರಿನ ಸಮಸ್ಯೆ ದೂರವಾಗಲಿದೆ.ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಸಚಿವ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ ಕಳೆದ 60 ವರ್ಷಗಳಲ್ಲಿ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಯಲ್ಲಿ ನಿರಂತರ ಕೊಡುಗೆ ನೀಡಿದೆ. ಭೂ ಮಸೂದೆ,ಬ್ಯಾಂಕ್ ರಾಷ್ಟ್ರೀಕರಣ ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳಿಂದ ಬದಲಾವಣೆಯಾಗಿದೆ. ಸಿದ್ದರಾಮಯ್ಯ ಅವರ ರಾಜ್ಯ ಸರಕಾರ ಚುನಾವಣಾ ಪೂರ್ವ ನೀಡಿದ 168 ಭರವಸೆಗಳಲ್ಲಿ 105 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ಬಡ್ಡಿ ರಹಿತ ಸಾಲದ ಚಿಂತನೆ ಸರಕಾರ ನಡೆಸಿದೆ ಎಂದು ಹೇಳಿದರು.
ವಿಧಾನಪರಿಷತ್ ಅಭ್ಯಥರ್ಿ ಪ್ರತಾಪಚಂದ್ರ ಶೆಟ್ಟಿ ಅವರು ಮಾತನಾಡಿ ಗ್ರಾ.ಪಂ.ಭೇಟಿ ಕಾರ್ಯಕ್ರಮದ ಮೂಲಕ ಸ್ಥಳೀಯ ಸಂಸ್ಥೆಗಳ ಸದಸ್ಯರ ಭಾವನೆಗಳನ್ನು ಅರ್ಥೈಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ.ಆ ಮೂಲಕ ಪಕ್ಷ ಸಂಘಟನೆಯ ಕಾರ್ಯವನ್ನು ನಡೆಸಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಸ್ಪರ್ಧೆಸುತ್ತಿದ್ದೇನೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ ಶಾಸಕರಾಗಿ ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ನಡೆಸಿದ ಕೀರ್ತಿ ಪ್ರತಾಪಚಂದ್ರ ಶೆಟ್ಟಿ ಅವರದ್ದು. ಕಾಂಗ್ರೆಸ್ ಮತದಾರರು ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ವಿಧಾನಪರಿಷತ್ನಲ್ಲಿ ಪಕ್ಷದ ಪ್ರತಿನಿಧಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಬೂಡ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಕಾವಳಪಡೂರು ಗ್ರಾ.ಪಂ.ಸದಸ್ಯ ಪಿ.ಜಿನರಾಜ ಆರಿಗ,ತಾ.ಪಂ.ಸದಸ್ಯ ಬಿ.ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್,ವೀಕ್ಷಕ ಶಶಿಧರ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಚ್.ಖಾದರ್,ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ವರ್ಗ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್,ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್,ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಪೂಂಜ, ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ಗೀತಾ ಶ್ರೀಧರ್,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ,ವಿವಿಧವಲಯ ಕಾಂಗ್ರೆಸ್ನ ಅಧ್ಯಕ್ಷರುಗಳಾದ ಆದಂ ಕುಂಞ,ವಾಸುದೇವ ಮಯ್ಯ,ಜಯ ಬಂಗೇರ, ಪದ್ಮಶೇಖರ್ ಜೈನ್ ನಾವೂರು, ಇಸ್ಮಾಯಿಲ್ ಸಿದ್ದಿಕ್ ಮತ್ತಿತರರು ಉಪಸ್ಥಿತರಿದ್ದರು.
ಎಂ.ರಾಜೀವ ಶೆಟ್ಟಿ ಎಡ್ತೂರು ಅವರು ಸ್ವಾಗತಿಸಿದರು. ಚಂದ್ರಶೇಖರ ಕರ್ಣ ವಂದಿಸಿದರು. ರಾಜೀವ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.
–
