ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಸಂಚಾಲಕ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಉಪಾಧ್ಯಕ್ಷ ಸತೀಶ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಶಿಕ್ಷಣ ಸಂಯೋಜಕಿ ಸುಜಾತ, ಪ್ರಮುಖರಾದ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು, ಬೇಬಿ ಕುಂದರ್, ವಲೇರಿಯನ್ ಮೊರಾಸ್ ಮೂಡುಬಿದ್ರೆ, ಸುಜಾತ ರಮೇಶ ಬೆಂಗಳೂರು, ಟ್ರಸ್ಟಿ ವಿಜಯ ಕುಮಾರ್ ಚೌಟ, ಮುಖ್ಯಶಿಕ್ಷಕಿ ಸಬಿತಾ ಲವಿನ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.
