ಕೈಕಂಬ: ಅಮ್ಮುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿರುವ ರಾಜೀವ ಗಾಂಧಿ ಸೇವಾ ಕೇಂದ್ರದ ಶಿಲಾನ್ಯಾಸ ಕಾರ್ಯಕ್ರಮವನ್ನು ಜ.2ರಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಳಿಪಾಡಿಗುತ್ತು ರಾಜೇಶ್ ನಾಯಕ್, ಪದ್ಮನಾಭ ಕೊಟ್ಟಾರಿ, ಅಮ್ಮುಂಜೆ ಗ್ರಾಮಸ್ಥರ ಪರವಾಗಿ ಸ್ಥಳ ದಾನ ಮಾಡಿದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ದೇರಾಜೆ ಯಶವಂತ ಪೂಜಾರಿ, ಅಮ್ಮುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ, ಜಯಶ್ರೀ ಕೆ.ಎ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಕರುಣಾಕರ್ ಆಳ್ವ, ರಂಗನಾಥ್ ಶೆಟ್ಟಿ, ದೇವ್ದಾಸ್ ಹೆಗ್ಡೆ, ಮಾಜಿ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಇಂಜಿನಿಯರ್ ಕೃಷ್ಣ, ಜನಾರ್ಧನ ಬಾರಿಂಜೆ, ರವೀಂದ್ರ ಸುವರ್ಣ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ನವೀನ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.
















