ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಎಸ್‍ವಿಎಸ್ ಕಾಲೇಜು ಬಳಿ ಇಳಿಜಾರು ರಸ್ತೆಯಲ್ಲಿ ಕಾರ್ಕಳದಿಂದ ಬಂಟ್ವಾಳ ಕಡೆಗೆ ಬುಧವಾರ ಬೆಳಿಗ್ಗೆ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡು ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಲಾರಿ ಚಾಲಕ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

