ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಇದೇ 23ರಂದು ವಾರ್ಷಿಕ ಬ್ರಹ್ಮಬೈದರ್ಕಳ ಜಾತ್ರಾ ಮಹೋತ್ಸವ ನಡೆಯಲಿದೆ. ಇದೇ 20ರಂದು ಮೊದಲ್ಗೊಂಡು 23ರತನಕ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಮತ್ತು ಮಾಯಂದಾತಿ ಉತ್ಸವ ಜೊತೆಗೆ ನಾಟಕ, ರಸಮಂಜರಿ ಮತ್ತಿತರ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗರಡಿ ಪ್ರಕಟಣೆ ತಿಳಿಸಿದೆ.
