ಬಂಟ್ವಾಳ : ಕೊಯಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ಕ್ಲಾಸಿನ ವಿದ್ಯಾರ್ಥಿಗಳಿಗೆ ತುಳು ಲಿಪಿ ಕಲಿಸುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಉದ್ಘಾಟಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ತುಳು ಲಿಪಿ ಶಿಕ್ಷಕ ಬಿ.ತಮ್ಮಯ್ಯ ಮತ್ತು ದಿನಕರ್‍ರವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಕುಕ್ಕರವರು ಸ್ವಾಗತಿಸಿ ವಂದಿಸಿದರು.
