ವಿದ್ಯಾರ್ಥಿಗಳಿಂದ ರಕ್ತದಾನ ‘ಆರೋಗ್ಯ ಜಾಗೃತಿಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ’
ಬಂಟ್ವಾಳ: ಸಮಾಜದಲ್ಲಿ ರಕ್ತದಾನ ಎಂಬುದು ಜೀವದಾನಕ್ಕೆ ಸಮಾನವಾಗಿ ಬೆಳೆದು ವಿದ್ಯಾದಾನ ನೀಡುವ ಇಂತಹ ಶಿಕ್ಷಣ ಸಂಸ್ಥೆಗಳಲ್ಲಿ ಆರೊಗ್ಯಜಾಗೃತಿ ಮೂಡಿಸಿದಾಗ ಆರೊಗ್ಯವಂತ ಮತ್ತು ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಮಂಗಳೂರು ಎ.ಬಿ. ಶೆಟ್ಟಿ ದಂತ ವಿದ್ಯಾಲಯ ಪ್ರಾಧ್ಯಾಪಕ ಡಾ.ಮುರಳಿ ಮೋಹನ ಚೂಂತಾರು ಹೇಳಿದ್ದಾರೆ.
22btl-Vamadpadvತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್, ವಿದ್ಯಾರ್ಥಿ ಕ್ಷೇಮ ಪಾಲನ ವೇದಿಕೆ ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಆರೋಗ್ಯ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ರಕ್ತದಾನ ಮಹತ್ವ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನವೀನ್‍ಚಂದ್ರ ಶೆಟ್ಟಿ, ಸಿ. ಶ್ರೀಧರ ಪೈ , ಯತೀಶ್ ಶೆಟ್ಟಿ ವಿಜಯನಗರ, ಜಿಲ್ಲಾ ಮಲೇರಿಯ ಪರಿವೀಕ್ಷಕ ಜಯರಾಮ ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಪ್ರೊ.ಜಯರಾಮ ಮತ್ತಿತರರು ಉಪಸ್ಥಿತರಿದ್ದರು.
ರೆಡ್ ರಿಬ್ಬನ್ ಕ್ಲಬ್ ಸಂಚಾಲಕ ಪ್ರೊ.ಸುರೇಶ್ ವಿಟ್ಲ ಸ್ವಾಗತಿಸಿ, ರಕ್ಷಿತ್ ವಂದಿಸಿದರು. ವಿನುಷಾ ವಂದನಾ ಗೊನ್ಸಲ್ವಿಸ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *