ಬಂಟ್ವಾಳ:ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಬಿರ್ವ ಸೆಂಟರ್ ಸಂಸ್ಥೆ ವತಿಯಿಂದ ನಿರ್ಮಾಣಗೊಂಡ 40ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಆಕರ್ಷಕ ವಿನ್ಯಾಸ ಹೊಂದಿರುವ ಸುಸಜ್ಜಿತ ಪರಿಸರ ಸ್ನೇಹಿ ವಸತಿ ಮತ್ತು ವಾಣಿಜ್ಯ ಸಂಕೀರ್ಣವು ಇದೇ 31ರಂದು ಬೆಳಿಗ್ಗೆ ಲೋಕಾರ್ಪಣೆಗೊಳ್ಳಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಿರ್ವ ಟವರ್ಸ್ ಕಟ್ಟಡ ಉದ್ಘಾಟಿಸಲಿದ್ದು, ಬಿಲ್ಲವ ಮಹಾಮಂಡಲ ಅಧ್ಯಕ್ಷ ಜಯ ಸಿ.ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
30btl-BIRWA TOWERS
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಮಾಜಿ ಅಧ್ಯಕ್ಷ ಎ.ಗೋವಿಂದ ಪ್ರಭು, ಶ್ರೀಗುರು ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ವಕೀಲ ಅಶ್ವನಿ ಕುಮಾರ್ ರೈ, ಉದ್ಯಮಿ ಸುಲೈಮಾನ್ ನಾರ್ಶ, ಸಂಸ್ಥೆ ಪಾಲುದಾರರಾದ ಯಶೋಧ ಮತ್ತು ಕಾಂತಪ್ಪ ಪೂಜಾರಿ, ವಸಂತಿ ಮತ್ತು ಕೆ.ಸಂಜೀವ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಸ್ಥೆ ಮಾಲೀಕರಾದ ಸೌಮ್ಯ ಮತ್ತು ಚಂದ್ರಹಾಸ ಪೂಜಾರಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *