ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಇರ್ವತ್ತೂರು ಪದವು ಎಂಬಲ್ಲಿ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ರಾಮಕ್ಕ (55) ಎಂದು ಗುರುತಿಸಲಾಗಿದ್ದು, ಇವರು ಭಾನುವಾರ ಸಂಜೆ ಇರ್ವತ್ತೂರು ಪದವು ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಅನಿಲ್ ಎಂಬವರ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದರಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.
