ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಳ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುಹಮ್ಮದ್ ಮುಸ್ತಾಫ ಇವರು ಬಿ.ಸಿ.ರೋಡ್‍ನಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಡಾ.ಅಶೋಕ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಜಿ.ಆನಂದ, ಮಾಜಿ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಕಾರ್ಯದರ್ಶಿ ರಾಮದಾಸ ಬಂಟ್ವಾಳ್, ಆನಂದ ಕುಲಾಲ್ ಮತ್ತಿತರರು ಇದ್ದರು.
