Bysuddi9

Feb 18, 2016

ವಿಟ್ಲ: ಶ್ರೀ ಡಿ ದೇವರಾಜ ಅರಸು ಹಿಂದಿಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಹಾಗೂ ಮೆಟ್ರಿಕಕ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಫೆ. 16ರಂದು ಜರಗಿತು.
hostel (1)

hostel (2)
ಅಧ್ಯಕ್ಷತೆಯಲ್ಲಿ ವಿಟ್ಲ ಜೆಸಿಐ ಅಧ್ಯಕ್ಷ ಬಾಬು ಕೆ ವಿ ವಹಿಸಿದ್ದರು. ಉದ್ಘಾಟನೆಯನ್ನು ಪುಷ್ಪಾ ಕ್ಲಿನಿಕ್ ನ ಡಾ| ವಿ ಕೆ ಹೆಗ್ಡೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಪ್ರಶಸ್ತಿ ವಿಜೇತ ಯುವಕ ಮಂಡಲದ ಗೌರವಾಧ್ಯಕ್ಷ ಸುದರ್ಶನ ಪಡಿಯಾರ್, ಭಾಸ್ಕರ ಶೆಟ್ಟಿ ಮತ್ತು ಮಾಧವ ಕುದ್ದುಪದವು ಭಾಗವಿಸಿದ್ದರು.

ಈ ಸಂದರ್ಭದಲ್ಲಿ ಎರಡೂ ನಿಲಯಗಳ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ `ಭಾವ ಸಂಗಮ’ ಮತ್ತು `ಚಿಗುರು’ ಹಸ್ತಪ್ರತಿಗಳನ್ನು ಬಿಡುಗಡೆ ಗೊಳಿಸಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಪುರಸ್ಕರಿಸಲಾಯಿತು. ಬಿ ಸಿ ಯಂ ನಿಲಯ ಮೇಲ್ವಿಚಾರಕಿ ಭವಾನಿ ಸ್ವಾಗತಿಸಿ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ವಿಜಯಲಕ್ಷ್ಮಿ ಪ್ರಸ್ತಾವಿಸಿದರು. ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು ಲಿಖಿತಾ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *