ಉಜಿರೆ : ರುಡ್ಸೆಟ್ ಸಂಸ್ಥೆಯಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ನಡೆಯಿತು. ಈ ಸಮಾರೋಪ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮತ್ತು ಎಸ್.ಡಿ.ಎಮ್ ಕಾಲೇಜ್ನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಯಶೋವರ್ಮರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಮಾಣಪತ್ರಗಳನ್ನು ವಿತರಿಸಿದರು.

photo

ಈ ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಟಿ.ಪಿ. ಜಗದೀಶ್ಮೂರ್ತಿ ಹಾಜರಿದ್ದರು. ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜಿತ್ ಕೆ. ರಾಜಣ್ಣವರ್ ಅತಿಥಿಗಳನ್ನು ಸ್ವಾಗತಿಸಿ, ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಅನಸೂಯ ವಂದಿಸಿದರು.

By suddi9

Leave a Reply

Your email address will not be published. Required fields are marked *