ಬಂಟ್ವಾಳ: ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಸೌಲಭ್ಯ ಒದಗಿಸಬೇಕು ಎಂದು ಇಲ್ಲಿನ ಸರ್ಕಾರಿ ನೌಕರರ ಸಂಘ ಆಗ್ರಹಿಸಿದೆ.
ಈ ಬಗ್ಗೆ ಬಿ.ಸಿ.ರೋಡ್ನಲ್ಲಿ ಇದೇ 26 ರಂದು ಮಧ್ಯಾಹ್ನ ಇಲ್ಲಿನ ತಾಲ್ಲೂಕು ಕಛೇರಿ ಬಳಿ ಬಹಿರಂಗ ಸಭೆ ಆಯೋಜಿಸಲಾಗಿದ್ದು, ಬಳಿಕ ತಹಶೀಲ್ದಾರರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
