ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ತುಂಬೆ ಅಣೆಕಟ್ಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಮನಾಪ ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್ ಶುಕ್ರವಾರ ಗಂಗಾಪೂಜೆ ನೆರವೇರಿಸಿದ ಬಳಿಕ ಬಾಗಿನ ಸಮರ್ಪಿಸಿದರು.
ಮಾಜಿ ಮೇಯರ್ ಶಶಿಧರ ಹೆಗ್ಡೆ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಲತಾ, ತಾಲ್ಲೂಕು ಪಂಚಾಯಿತಿ ಸದಸ್ಯ ಗಣೇಶ ಸುವರ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ, ಅಭಿವೃದ್ಧಿ ಉಪ ಆಯುಕ್ತ ಶಿವಶಂಕರ ಸ್ವಾಮಿ, ರಾಜೇಶ ಸುವರ್ಣ ಮತ್ತಿತರರು ಇದ್ದರು.
