ಬಂಟ್ವಾಳ: ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸುವ `ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ 2016′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಟ್ಲ ಬಿ ಎಸ್ ಎನ್ ಎಲ್ ಡಿವಿಜನಲ್ ಸೀನಿಯರ್ ಆಫಿಸರ್ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮೈಕ್ರೋ ಕಂಪ್ಯೂಟರ ಸೊಲ್ಯೂಷನ್ನಿನ ಸತ್ಯನಾರಾಯಣ, ವಿಠಲ ವಿದ್ಯಾ ಸಂಘದ ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಜಾನ್ ಡಿ ಸೋಜಾ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ಶಿಕ್ಷಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಶಿಕ್ಷಕ ಸಂತೋಷ್, ಶಿಕ್ಷಕಿಯರಾದ ಜಯಶ್ರೀ ಮತ್ತು ಹೇಮಾವತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
