ಬಂಟ್ವಾಳ: ಬಂಟ್ವಾಳ ತುಳು ಕೂಟ ಮತ್ತು ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಇದೇ 5ರಂದು ಬೆಳಿಗ್ಗೆ ಬಿ.ಸಿ.ರೋಡು ಪದ್ಮನಾಭ ನಗರದಲ್ಲಿ ‘ತುಳು ಮಿನದನ’ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಎಂ.ಜಾನಕಿ ಬ್ರಹ್ಮಾವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಇದೇ ವೇಳೆ ತುಳುನಾಡ ವೈಭವ, ವಿಚಾರಗೋಷ್ಠಿ, ರಾಗ ರಂಜಿನಿ ರಸಮಂಜರಿ, ಯಕ್ಷಗಾನ ಮತ್ತಿತರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
—
