ಕೈಕಂಬ: ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇದರ ಇ.ಆರ್.ಡಬ್ಲ್ಯೂ.ಸಿ ಯೋಜನೆಯ ಪ್ರೇರಣಾ ಮಹಿಳಾ ಒಕ್ಕೂಟದ ವತಿಯಿಂದ ಕೈಕಂಬ ವಲಯ ಮಟ್ಟದಲ್ಲಿ ಸ್ವ ಸಹಾಯ ಸಂಘಗಳ ಸದಸ್ಯೆಯರಿಗೆ ಆಟೋಟ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಗುರುಪುರ ಪಂಚಾಯತ್‍ನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಯೋಜನೆಯ ಸಂಯೋಜಕರಾದ ವಿಲಿಯಂ ಸಾಮ್ಯುವೆಲ್ ಗುರುಪುರ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯವರು ಉಪಸ್ಥಿತರಿದ್ದು ಮಹಿಳೆಯವರಿಗೆ ಶುಭಾಶಂಸನೆ ಗೈದರು.
ಪ್ರಪುಲ್ಲ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಪದ್ಮಿನಿ ಧನ್ಯವಾದ ಗೈದರು. ಕಾರ್ಯಕ್ರಮದ ನಿರ್ವಹಣೆಯನ್ನು ಕೈಕಂಬ ವಲಯದ ಸಿಬ್ಬಂದಿ ವರ್ಗದವರು ನಿರ್ವಹಿಸಿದರು.
