ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಸಮೀಪದ ಕಲ್ಕುರಿಪದವು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಹಿಲರಿ ಡಿಸೋಜ(80) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಇಲ್ಲಿನ ಸಹೋದರನ ಮನೆಯಲ್ಲಿ ವಾಸವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು ಎಬನ್ನಲಾಗಿದೆ. ಬುಧವಾರ ರಾತ್ರಿ ಮನೆಯಲ್ಲಿ ಎಂದಿನಂತೆ ಊಟ ಮಗಿಸಿ ಮಲಗಿದ್ದವರು ಬೆಳಿಗ್ಗೆ ಎದ್ದು ನೋಡಿದಾಗ ಬಾವಿಯೊಳಗೆ ಶವ ಪತ್ತೆಯಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
