ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನರೇಂದ್ರ ಮೋದಿ ಸಂಪುಟದಲ್ಲಿ ಸದಾನಂದಗೌಡ ಅವರಿಗೆ 6ನೇ ಸ್ಥಾನ ಲಭಿಸಿದೆ.

ಡಿವಿಎಸ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಖಾತೆ ದೊರೆಯುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
 dv
ರಾಜ್ಯದ ಮುಖ್ಯಮಂತ್ರಿಯಾಗಿ ಸದಾನಂದಗೌಡರು ಪ್ರಾಮಾಣಿಕ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಪ್ರದಾನಮಂತ್ರಿ ನರೇಂದ್ರ ಮೋದಿ ಕೇಂದ್ರ ಸಂಪುಟ ದರ್ಜೆಯ ಸಚಿವರಾಗುವ ಅವಕಾಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

By suddi9

Leave a Reply

Your email address will not be published. Required fields are marked *