ಬಂಟ್ವಾಳ: ರಾಜಕಾರಣಿಗಳು ದಕ್ಷತೆಯಿಂದ ಇದ್ದಾಗ ಮಾತ್ರ ಅಧಿಕಾರಿಗಳು ದಕ್ಷತೆಯಿಂದ ಕೆಲಸ ನಿರ್ವಹಿಸಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಕುಕ್ಕಿಪಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮಾಡಮೆ ನೇತಾಜಿ ರಸ್ತೆಯಿಂದ ಕಲ್ಕುರಿವರೆಗಿನ ರಸ್ತೆ ಅಭಿವೃದ್ದಿ ಹಾಗೂ ಮರು ಡಾಮಾರೀಕರಣಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಗಬೆಟ್ಟು ಬಹುಗ್ರಾಮ ಕುಡಯುವ ನೀರಿನ ಯೋಜನೆ ಪ್ರಗತಿಯಲ್ಲಿದ್ದು ಮುಂದಿನ ಆರೇಳು ತಿಂಗಳಿನೊಳಗೆ ಕಾಮಗಾರಿ ಪೂರ್ತಿಗೊಳ್ಳಲಿದೆ ಎಂದರು.

ಈ ಸಂದರ್ಭ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಂಚಾಯಿತಿ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ನರೇಂದ್ರ ಬಾಬು ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರ್ ಶಾಂತಿ, ಗುತ್ತಿಗೆದಾರ ಧೀರಜ್ ನಾಯಕ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಸ್ವಾಗತಿಸಿ, ವಂದಿಸಿದರು.
