ಬಂಟ್ವಾಳ : ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇ ಶಕರಾದ ಬಾಲಶೇಖರ್ ಎಚ್. ರವರನ್ನು ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಭಾರ ವ್ಯವಸ್ಥಾಪಕ ಶೇಖರ್, ನಾಮನಿರ್ದೇಶಿತ ಸದಸ್ಯ ಪ್ರಕಾಶ್ ಬಿ.ಶೆಟ್ಟಿ ಮತ್ತು ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

