ಬಂಟ್ವಾಳ: ತಾಲ್ಲೂಕಿನ ಸಜಿಪಮೂಡ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಮೂರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
1. ಗುಮಾಸ್ತ ಅಥವಾ ಬೆಳಚ್ಚುಗಾರ ಹುದ್ದೆಗೆ ಪಿಯೂಸಿ ತೇರ್ಗಡೆ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಆರು ತಿಂಗಳ ಕಂಪ್ಯೂಟರ್ ತರಬೇತಿ ಸರ್ಟಿಫಿಕೇಟ್ ಹೊಂದಿರಬೇಕು.
2.ಜವಾನ ಹುದ್ದೆಗೆ ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರಬೇಕು.
3.ಸ್ವಚ್ಛತಾಗಾರ ಹುದ್ದೆಗೆ ಏಳನೇ ತರಗತಿ ತೇರ್ಗಡೆಯಾಗಿರಬೇಕು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಇದೇ 26ರಂದು ಸಂಜೆ ಐದು ಗಂಟೆ ಒಳಗೆ ಪಂಚಾಯಿತಿ ಕಚೇರಿಯಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪಂಚಾಯಿತಿ ವ್ಯಾಪ್ತಿ ನಿವಾಸಿ ಎಂಬ ಬಗ್ಗೆ ಸೂಕ್ತ ದಾಖಲೆ ಪತ್ರ ಒದಗಿಸುವುದರ ಜೊತೆಗೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
