ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯತ್ , ಬಂಟ್ವಾಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳು , ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ದುರ್ಗಾ ಭಜನಾ ಮಂಡಳಿ ಮೆಲ್ಕಾರಿನಲ್ಲಿ ಕಾನೂನು ಸಾಕ್ಷರತಾ ರಥ , ಸಂಚಾರಿ ನ್ಯಾಯಾಲಯದ ಅಭಿಯಾನ ಮತ್ತು ಲೋಕ ಅದಾಲತ್ ಕಾರ್ಯಕ್ರಮವನ್ನು ಗೌ/ ಹಿರಿಯ ಸಿವಿಲ್ ನ್ಯಾಯಾಧೀ ಶ ಚಂದ್ರಶೇಖರ ಯು. ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಗಣೇಶ್ ಪೈ ಮೋಟಾರು ವಾಹ ಚಾಲನೆ ನೋಂದಣೆ ಮತ್ತು ವಿಮೆ ಬಗ್ಗೆ ಮಾಹಿತಿ ನೀಡಿದರು. ಯುವ ಸಂಗಮ ಮೆಲ್ಕಾರ್ ನ ಗೌರವಾಧ್ಯಕ್ಷ ಎಂ.ಎನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ರಮೇಶ್ ಉಪಾಧ್ಯಾಯ, ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಜಯಂತ್ ಶೆಟ್ಟಿ, ಮೇಲ್ವಿಚಾರಕಿ ಭಾರತಿ ಕುಂದರ್ ಉಪಸ್ಥಿತರಿದ್ದರು. ನಿಯೋಜಿತ ಲಯನ್ ಅಧ್ಯಕ್ಷ ಲಕ್ಷ್ಮಣ ಕುಲಾಲ್ ಸ್ವಾಗತಿಸಿದರು. ಅಂಗನವಾಡಿ ಶಿಕ್ಷಕಿ ಮಾಲತಿ ವಂದಿಸಿ , ಲಯನ್ಸ್ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.
