ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ಕ್ಲಬ್ ಹಾಗೂ ಪತ್ರಕರ್ತರ ಸಂಘದ ರಜತ ವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ಪತ್ರಕರ್ತರ ಸಂಘದ ರಜತವರ್ಷಾ ಚರಣೆಯ ಪ್ರಯುಕ್ತ ಮೂರು ದಿನಗಳ ಮಕ್ಕಳ ಬೇಸಿಗೆ ಶಿಬಿರ ಬಿ.ಸಿ.ರೋಡಿನಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ನಡೆಯಲಿದೆ.
ಎ.4ರಿಂದ ಎ. 6ರವರೆಗೆ ಶಿಬಿರ ನಡೆಯಲಿದ್ದು 9 ರಿಂದ 14 ವರ್ಷ ಪ್ರಾಯದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲು ಅವಕಾಶ ಇದೆ. ಶಿಬಿರ ಉಚಿತವಾಗಿದ್ದು ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಏ.1ರ ಒಳಗಾಗಿ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಹೆಸರು ನೋಂದಾಯಿಸಬಹುದು ಅಥವಾ ದೂರವಾಣಿ ಸಂಖ್ಯೆ 9964213454, 9481017606, 9449189506 ಸಂಪರ್ಕಿಸಬಹುದು ಎಂದು ರಜತವರ್ಷಾಚರಣೆ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
