ಬಂಟ್ವಾಳ:ತಾಲೂಕಿನ ವಾಮದಪದವು ಸಮೀಪದ ಬದನಡಿ ಶ್ರೀ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ಇದೇ 31ರಂದು ಬೆಳಿಗ್ಗೆ ನಾಗಶಿಲಾ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಹಾಗೂ ಆಶ್ಲೇಷ ಬಲಿ ಪೂಜೆಯು ಪೆಜಕ್ಕಳ ಗಂಗಾಧರ ಕಕೃಣ್ಣಾಯ ಪೌರೋಹಿತ್ಯದಲ್ಲಿ ನಡೆಯಲಿದೆ.
ಇದೇ ವೇಳೆ ರಕ್ತೇಶ್ವರಿ, ಬಬ್ಬರ್ಯ ಮತ್ತಿತರ ಪರಿವಾರ ದೈವಗಳ ಪ್ರತಿಷ್ಠೆ ನಡೆಯಲಿದ್ದು, ಮಧ್ಯಾಹ್ನ ಸಾಔಜನಿಕ ಅನ್ನಸಂತರ್ಪಣೆ ಮತ್ತು ರಾತ್ರಿ ಧೂಮ್ರ-ಧೂಮಾವತಿ, ಕೊಡಮಣಿತ್ತಾಯಿ, ಮೈಸಂದಾಯ, ಪಂಜುರ್ಲಿ ದೈವಗಳಿಗೆ ನೇಮೋತ್ಸವ ಹಾಗೂ ರಾಹು-ಗುಳಿಗ ದೈವಗಳಿಗೆ ಕೋಲ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.
