ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳವಾರ ರಾತ್ರಿ 11 ಗಂಟೆಯ ಹೊತ್ತಿಗೆ ತುಂಬೆ ರಾಮಲ್ಕಟ್ಟೆ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಶಂಕರ ಪೂಜಾರಿ ಎಂಬವರ ಪುತ್ರ ಹರೀಶ್ ಪೂಜಾರಿ(42) ಮೃತಪಟ್ಟವರಾಗಿದ್ದಾರೆ.
ಇವರು ಮನೆಗೆ ತೆರಳುತ್ತಿದ್ದಾಗ ರಸ್ತೆ ದಾಟಲೆಂದು ನಿಂತಿದ್ದ ವೇಳೆ ಬಿ.ಸಿ.ರೋಡ್ನಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಸ್ವರೂಪದ ಗಾಯಗೊಂಡ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
