ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಾರ್ಷಿಕೋತ್ಸವ ಮತ್ತು ರಂಗ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿಗೆ ಅವಿರತ ಶ್ರಮಿಸಿದ ಇಲ್ಲಿನ ಶಿಕ್ಷಕ-ಶಿಕ್ಷಕಿಯರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಗ್ರಾ.ಪಂ.ಅಧ್ಯಕ್ಷ ವಿಠಲ, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ.ಸದಸ್ಯೆ ಲಕ್ಷ್ಮೀ ಗೋಪಾಲ ಆಚಾರ್ಯ ಮತ್ತಿತರರು ಇದ್ದರು.
