ಬಂಟ್ವಾಳ: ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರಿಬ್ಬರು ಗಂಭೀರಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು ಮೇಲ್ಸೇತುವೆಯಲ್ಲಿ ಭಾನುವಾರಪರಾಹ್ನ ನಡೆದಿದೆ.
ಗಂಭೀರಗಾಯಗೊಂಡ ಸವಾರ ಹಾಗೂ ಸಹಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದು ಬಂದಿಲ್ಲ. ರಿಕ್ಷಾದಲ್ಲಿದ್ದ ಮೂವರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
IMG_20160403_152144
ದ್ವಿಚಕ್ರ ವಾಹನ ಸವಾರರು ಮೇಲ್ಸೇತುವೆಯಲ್ಲಿ ಕೈಕಂಬ ಕಡೆಗೆ ತೆರಳುತ್ತಿದ್ದು, ಇದೇ ವೇಳೆ ವಿರುದ್ದ ದಿಕ್ಕಿನಲ್ಲಿ ಬಂದ ರಿಕ್ಷಾ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಏಕಮುಖ ಸಂಚಾರಕ್ಕೆ ಅವಕಾಶ ವಿರುವ ಮೇಲ್ಸೇತುವೆಯಲ್ಲಿ ರಿಕ್ಷಾ ವಿರುದ್ದ ದಿಕ್ಕಿನಲ್ಲಿ ಬಂದಿರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ ಸ್ಥಳಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜುಗುಜ್ಜಾಗಿದೆ

By suddi9

Leave a Reply

Your email address will not be published. Required fields are marked *