ಬಂಟ್ವಾಳ: ತಾಲೂಕು ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಜರಗಿತು.
Photoಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್ ಅವರನ್ನು ಮತ್ತು ತಾ.ಪಂ.ಸದಸ್ಯೆ ಧನಲಕ್ಷ್ಮೀ ಸಿ.ಬಂಗೇರ ಅವರನ್ನು ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲಾ ವತಿಯಿಂದ ಸಮ್ಮಾನಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಅಧ್ಯಕ್ಷತೆ ವಹಿಸಿ ಅಭಿನಂದನಾ ಭಾಷಣ ಮಾಡಿ ಮಾತನಾಡಿ ನಿಸ್ವಾರ್ಥ, ಪ್ರಾಮಾಣಿಕತೆಯಿಂದ ಜನಸೇವೆಗೈಯುವ ಜನಪ್ರತಿನಿ„ಗಳನ್ನು ಜನರು ಗೌರವಿಸುತ್ತಾರೆ. ಅಂತಹ ನಿಷ್ಕಂಳಕ ವ್ಯಕ್ತಿತ್ವದ ಬಿ.ಪದ್ಮಶೇಖರ ಜೈನ್ ಅವರು ಈ ಭಾಗದ ಜನಪ್ರತಿನಿ„ಯಾಗಿ ಆಯ್ಕೆಯಾಗಿರುವುದು ಜನತೆಯ ಸೌಭಾಗ್ಯ. ಅವರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಸಾಧ್ಯವಾಗಲಿ ಎಂದು ಹೇಳಿದರು.

ಸಮ್ಮಾನಕ್ಕೆ ಪ್ರತಿಕ್ರಿಯಿಸಿದ ಬಿ.ಪದ್ಮಶೇಖರ ಜೈನ್ ಅವರು ಮಾತನಾಡಿ ಕಾವಳಮೂಡೂರಿನ ಜನತೆ ನನ್ನ ಮೇಲೆ ಅಭಿಮಾನವಿಟ್ಟು ಜಿಲ್ಲಾ ಪಂಚಾಯತ್ ಸದಸ್ಯನಾಗಿ ಆಯ್ಕೆ ಮಾಡಿರುವುದಕ್ಕೆ ಚಿರಋಣಿಯಾಗಿರುತ್ತೇನೆ. ಅದಕ್ಕಾಗಿ ಇಲ್ಲಿನ ಜನತೆಯನ್ನು ಅಭಿನಂದಿಸುತ್ತೇನೆ. ಜನಸೇವೆಗೆ ಹಿಂದೆಯೂ ಮತ್ತು ಮುಂದಕ್ಕೂ ಸದಾ ಬದ್ಧನಾಗಿದ್ದೇನೆ ಎಂದು ಹೇಳಿದರು.
ತಾ.ಪಂ.ಸದಸ್ಯೆ ಧನಲಕ್ಷ್ಮೀ ಸಿ.ಬಂಗೇರ ಅವರು ಮಾತನಾಡಿ ಸರಕಾರದ ಸೌಲಭ್ಯಗಳನ್ನು ಜನತೆಗೆ ಮುಟ್ಟಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಅದಕ್ಕಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಗ್ರಾ.ಪಂ.ಅಧ್ಯಕ್ಷ ಸಂತೋಷ್ ಪೂಂಜ, ಗ್ರಾ.ಪಂ.ಉಪಾಧ್ಯಕ್ಷೆ ಚಂದ್ರಾವತಿ, ಸದಸ್ಯರಾದ ಸತೀಶ್ ಪಡಂತ್ರ್ಯಬೆಟ್ಟು, ಮೋಹನ ಆಚಾರ್ಯ, ಮಾಜಿ ಅಧ್ಯಕ್ಷ ಯಾಕೂಬ್ ಸಾಹೇಬ್, ಮಂಗಳೂರು ಉದ್ಯಮಿ ಪುರುಷೋತ್ತಮ ಗೌಡ, ನಿವೃತ್ತ ತಹಶೀಲ್ದಾರ್ ಲೋಕೇಶ ಪೂಜಾರಿ, ಉದ್ಯಮಿ ಜಗನ್ನಾಥ್ ಶೆಟ್ಟಿ ಕೆದ್ದಳಿಕೆ, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಇದೇ ವೇಳೆ ಸರಕಾರದಿಂದ ಉಚಿತವಾಗಿ ಕೊಡಮಾಡಿದ ಶೂಗಳು ಮತ್ತು ಪರಿಶಿಷ್ಟ ವರ್ಗದವರಿಗೆ ಸ್ಕೂಲ್ ಬ್ಯಾಗ್ ಹಾಗೂ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಕೆ.ರಮೇಶ್ ನಾಯಕ್ ರಾಯಿ ಅವರು ಸ್ವಾಗತಿಸಿದರು. ಶಿಕ್ಷಕರಾದ ಸಹಸ್ರನಾಮ ವಂದಿಸಿದರು. ಚಂದಪ್ಪ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *