ಅಂಬೇಡ್ಕರ್ ಎಲ್ಲರಿಗೂ ದಾರಿದೀಪ: ಎಸ್ಪಿ ಶರಣಪ್ಪ
ಬಂಟ್ವಾಳ:ದೇಶದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾಗದೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರು ಎಂದೆಂದಿಗೂ ದಾರಿದೀಪವಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಹೇಳಿದರು.
ತಾಲ್ಲೂಕಿನ ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಸ್ವಜಾತಿ ಬಾಂಧವರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1btl-Ambedkar
ಸಂಘದ ಜಿಲ್ಲಾಧ್ಯಕ್ಷ ಮೋಹನ್ ನೆಲ್ಲಿಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವ್ಯಕ್ತಿಯಲ್ಲಿ ಕ್ರೀಡಾ ಸ್ಪೂರ್ತಿ ಹಾಗೂ ಸಕರಾತ್ಮಕ ಚಿಂತನೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಮತ್ತು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಯುವ ಪೀಳಿಗೆಗೆ ಸರಿಯಾದ ದಿಕ್ಕಿನಲ್ಲಿ ಶಿಕ್ಷಣ ಮತ್ತು ಮಾರ್ಗದರ್ಶನ ಹಿರಿಯರಿಂದ ಸಿಗಬೇಕು ಎಂದರು.
ಜಿಲ್ಲಾ ಕಾನೂನು ಪ್ರಾಧಿಕಾರ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಕಳ್ಳಿಗೆ ಕನಪಾಡಿತ್ತಾಯ ದೈವಸ್ಥಾನ ಆಡಳಿತ ಮೊಕ್ತೇಸರ ರಾಜಶೇಖರ ರೈ, ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಸಿ. ಚಂದಪ್ಪ ಮತ್ತಿತರರು ಇದ್ದರು.
ಸಂಘದ ಗೌರವಾಧ್ಯಕ್ಷ ದೇವದಾಸ್ ಕೃಷ್ಣಾಪುರ ಸ್ವಾಗತಿಸಿ, ವಿಶ್ವನಾಥ ಚೆಂಡ್ತಿಮಾರ್ ವಂದಿಸಿದರು.

By suddi9

Leave a Reply

Your email address will not be published. Required fields are marked *