ಬಂಟ್ವಾಳ:ಅರಳ ಮತ್ತು ಕೊಯಿಲ ಗ್ರಾಮಗಳಿಗೆ ಸಂಬಂಧಪಟ್ಟ ಇಲ್ಲಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವಕ್ಕೆ ಸಂಬಂಧಪಟ್ಟಂತೆ ಇದೇ 27ರಂದು ಮಧ್ಯಾಹ್ನ 3ಗಂಟೆಗೆ ದೇವಸ್ಥಾನದ ಸಭಾಂಗಣದಲ್ಲಿ ಎರಡು ಗ್ರಾಮಗಳ ಭಕ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎಂ.ಅಡ್ಯಂತಾಯ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ, ಅರಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ ಇವರು  ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *