ಬಂಟ್ವಾಳ: ಸಂಘಟನೆಯ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿದಾಗ ಅದು ಹೆಚ್ಚು ಪರಿಣಾಮಕಾರಿಯಾಗಿ ಯಶಸ್ವಿಯಾಗಲು ಸಾಧ್ಯ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಯಾತ್ ನೌಕರರು ಹಾಗೂ ಸಿಬ್ಬಂದಿವರ್ಗದ ವತಿಯಿಂದ ಸಾಮಾಥ್ರ್ಯ ಸೌಧದಲ್ಲಿ ನಡೆದ ರಕ್ತದಾನ ಶಿಭಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಘಟನೆಯ ವತಿಯಿಂದ ಸಮಾಜಕ್ಕೆ ಇಂತಹ ಕೊಡುಗೆಗಳು ಇಂದಿನ ದಿನಗಳಲ್ಲಿ ಬಹಳ ಮುಖ್ಯವಾಗಿದೆ ಎಂದರು. ಸರಕಾರಿ ನೌಕಕರು ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಇತರರಿಗೆ ಅದು ಮಾದರಿಯಾಗುತ್ತದೆ ಎಂದು ಕಾರ್ಯಕ್ರಮಕ್ಕೆ ಶುಭಹಾರ್ಯೆಸಿದರು.

IMG_0502
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ.ಪಂಚಾಯತ್ ಉಪಕಾರ್ಯದರ್ಶಿ  ಎನ್ ಆರ್. ಉಮೇಶ್, ತಾಂತ್ರಿಕ ಮೇಲ್ವಿಚಾರಕ ಎಡ್ರ್ವಡ್, ಗ್ರಾ.ಪಂ.ಸದಸ್ಯರ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ,ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘದ ಅಧ್ಯಕ್ಷ ಗೋಕುಲದಾಸ ಭಕ್ತ ಉಪಸ್ಥಿತರಿದ್ದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಂಯಾನ್ ಮಿರಾಂದ ಸ್ವಾಗತಿಸಿ, ಪಿಡಿಒ ವಿಜಯಶಂಕರ ಆಳ್ವ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು

By suddi9

Leave a Reply

Your email address will not be published. Required fields are marked *