ಬಂಟ್ವಾಳ : ತಾಲೂಕಿನ ಕೆದ್ದಳಿಕೆ ದ.ಕ.ಜಿ.ಪಂ. ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ತಾಯಿ ಮಡಿಲಿನಿಂದ ಶಾಲೆಯ ತೊಟ್ಟಿಲಿಗೆ ಎನ್ನುವ ಹೆಸರಿನಲ್ಲಿ ಸೋಮವಾರ ವಿಶಿಷ್ಟವಾಗಿ ಆಚರಿಸಲಾಯಿತು.
ಮಕ್ಕಳ ವೈಭವದ ದಿಬ್ಬಣ-ತೊಟ್ಟಿಲಲ್ಲಿ ಮಗುವನ್ನು ಕುಳ್ಳಿರಿಸಿ ಶಿಕ್ಷಕಿಯರಿಗೆ ಪೋಷಕರಿಂದ ಮಗುವಿನ ಹಸ್ತಾಂತರ ,ಮಕ್ಕಳಿಗೆ ಫಲ ಪುಷ್ಪ-ಹಾರಾರ್ಪಣೆ,ಆರತಿ ಬೆಳಗಿಸುವಿಕೆ ,ಸಿಹಿ ತಿಂಡಿ ವಿತರಣೆ,ಶಾಲಾ ದೇಗುಲಕ್ಕೆ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮಗಳೊಂದಿಗೆ ಕೆದ್ದಳಿಕೆ ಶಾಲಾ ಪ್ರಾರಂಭೋತ್ಸವ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.
ವಾದ್ಯ-ಬ್ಯಾಂಡ್ಗಳ ನಿನಾದ, ವಿವಿಧ ವೇಷ ಭೂಷಣಗಳ ಕುಣಿತ, ವಿವಿಧ ಘೋಷಣೆಗಳ ಆಕರ್ಷಣೆಯೊಂದಿಗೆ ಕೆದ್ದಳಿಕೆ ಅಂಗನವಾಡಿ ಕೇಂದ್ರದ ಬಳಿಯಿಂದ ನೂತನವಾಗಿ ಒಂದನೇ ತರಗತಿಗೆ ಸೇರ್ಪಡೆಗೊಂಡ ಮಕ್ಕಳನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು.1 (2)
3 (1)

4

ಬಂಟ್ವಾಳ ತಾ.ಪಂ. ಚಂದ್ರಹಾಸ ಕರ್ಕೇರ ಅವರು ಒಂದನೇ ತರಗತಿಗೆ ದಾಖಲಾದ ಮಕ್ಕಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸುವ ಮೂಲಕ ಕೆದ್ದಳಿಕೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಹೊರೆ ಕಾಣಿಕೆ ಉಗ್ರಾಣವನ್ನು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳು ಶಿಕ್ಷಣ ವಂಚಿತರಾಗಬಾರದು.ಪ್ರತಿ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದ ಅವರು ಜಿಲ್ಲೆಯಾದ್ಯಂತ ಇಂದು ಶಾಲಾ ಪ್ರಾರಂಭೋತ್ಸವ ನಡೆಯುತ್ತಿದ್ದು ಇದನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಶೈಕ್ಷಣಿಕ ಜಾಗೃತಿ ಮೂಡಿಸುವ ಇಲ್ಲಿನ ಕಾರ್ಯಕ್ರಮ ಇತರೆಡೆಗಳಿಗೆ ಮಾದರಿಯಾಗಿದೆ. ಶೈಕ್ಷಣಿಕ ಪ್ರಗತಿಗಾಗಿ ಮತ್ತು ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿ ನಲ್ಲಿ ಸರಕಾರ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗುವ ಮೂಲಕ ಸದೃಢ ದೇಶವನ್ನು ಕಟ್ಟುವಂತಾಗಬೇಕು ಎಂದು ಹೇಳಿದರು.

ದಿಬ್ಬಣ ಮೆರವಣಿಗೆಯಲ್ಲಿ ಬಂದ ಮಕ್ಕಳನ್ನು ಶಾಲಾ ಬಳಿ ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಪನ್ನೀರು ಸಿಂಪಡಿಸಿ , ಹೂ ಹಾಕಿ ಸ್ವಾಗತಿಸಿದರು. ಬಳಿಕ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹಣ್ಣು ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಊರವರಿಂದ ಶಾಲೆಗೆ ಹೊರೆಕಾಣಿಕೆ ನೀಡಲಾಯಿತು. ತರಕಾರಿಗಳು, ಅಕ್ಕಿ, ತೆಂಗಿನಕಾಯಿ ಮೊದಲಾದ ಹೊರೆಕಾಣಿಕೆ ಶಾಲೆಗೆ ಸಮರ್ಪಣೆಯಾಯಿತು.
ಕ್ಷೇತ್ರ ಶಿಕ್ಷಣಾಕಾರಿ ಶೇಷಶಯನ ಕಾರಿಂಜ ಮಾತನಾಡಿ ತಾಲೂಕಿನಾದ್ಯಂತ ಶಾಲಾ ಪ್ರಾರಂಭೊತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದೆ.ಸರಕಾರ ಸರಕಾರಿ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು ಪೋಷಕರು ಮತ್ತು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್,ಬಂಟ್ವಾಳ ತಾ.ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್,ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ,ತಾ.ಪಂ.ಸ್ಥಾಯಿ ಸಮಿತಿ ಸದಸ್ಯೆ ಧನಲಕ್ಷ್ಮಿ  ಬಂಗೇರ,ಶಿಕ್ಷಣ ಸಂಪನ್ಮೂಲಾಕಾರಿ ರಾಜೇಶ್,ಅಕ್ಷರದಾಸೋಹ ಅಕಾರಿ ಶ್ರೀಕಾಂತ್ ಅವರು ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ದಿವಾಕರ ದಾಸ್, ಗ್ರಾ.ಪಂ. ಅಧ್ಯಕ್ಷ ಸಂತೋಷ್ ಪೂಂಜ, ಉಪಾಧ್ಯಕ್ಷೆ ಚಂದ್ರಾವತಿ, ಸದಸ್ಯರಾದ ಮೋಹನ ಆಚಾರ್ಯ ,ಸತೀಶ್ ಪಡಂತ್ರಬೆಟ್ಟು ,ಶಾಲಾ ಶಿಕ್ಷಕ ವೃಂದ,ಶಾಲಾಭಿವೃದ್ಧಿ ಸಮಿತಿ ಸದಸ್ಯರು,ಪೋಷಕರು ಉಪಸ್ಥಿತರಿದ್ದರು. ಉದಯ ಕುಮಾರ್ ಜ್ಯೋತಿ ಗುಡ್ಡೆ ಅವರು ನೀರಿನ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಲೇಖನ ಪುಸ್ತಕಗಳನ್ನು ವಿತರಿಸಲಾಯಿತು.

ಮುಖ್ಯ ಶಿಕ್ಷಕ ರಮೇಶ ನಾಯಕ್ ರಾಯಿ ಅವರು ಸ್ವಾಗತಿಸಿದರು. ಶಾಲಾ ಸಂಪನ್ಮೂಲ ವ್ಯಕ್ತಿ ಗೋಪಾಲ ಅಂಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಚಂದಪ್ಪ ವಂದಿಸಿದರು.ರಂಗ ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *