ಬಂಟ್ವಾಳ: ತಾಲೂಕಿನಲ್ಲಿ 30 ಡೆಂಘೆ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ಬೆಳಿಗ್ಗೆ ಬಿ.ಸಿ.ರೋಡಿನ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.
ಡೆಂಘೆರೋಗ ವ್ಯಾಪಿಸಿಕೊಂಡಿರುವ ಹಿನ್ನಲೆಯಲ್ಲಿ ಜನತೆ ಆತಂಕಗೊಂಡಿದ್ದು ಆರೋಗ್ಯ ಇಲಾಖೆಯ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಪ್ರಭು ರೋಗ ನಿಯಂತ್ರಣಕ್ಕೆ ಇಲಾಖೆ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಅಧಿಕೃತವಾಗಿ ಡೆಂಘು ಬಾಧಿತರ ಅಂಕಿ ಅಂಶಗಳನ್ನು ಸಚಿವರಿಗೆ ನೀಡಿದರು. ರೋಗ ಉಲ್ಭಣಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಸೂಚಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾಧವ ಮಾವೆ, ತಹಶೀಲ್ದರ್ ಪುರಂದರ ಹೆಗ್ಡೆ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಪ್ರಭು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
