ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ರಾಜ್ಯ ಮಹಿಳಾ ಸಂಘಟನಾ ಒಕ್ಕೂಟದ ಕಚೇರಿಯು ಶನಿವಾರ ಉದ್ಘಾಟನೆಗೊಂಡಿತು.  ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ ಸಂಘಟನಾ ಒಕ್ಕೂಟ ರಾಜ್ಯಾಧ್ಯಕ್ಷೆ ಶೈಲಜಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಅಹಿಂದಾ ಕಾರ್ಯಧ್ಯಕ್ಷ ಪದ್ಮನಾಭ ನರಿಂಗಾಣ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ್ಣ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಅಧ್ಯಕ್ಷೆ ಜ್ಯೋತಿಕಾ ದೇವಿ, ಪುತ್ತೂರು ಸಮಾಜ ಸೇವಕಿ ಜೊಹಾರಾ ನಿಸಾರ್, ರಾಜ್ಯ ಮಹಿಳಾ ಸಂಘಟನಾ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಜಯಲಕ್ಷ್ಮೀ, ಕಾ ಧ್ಯಕ್ಷೆ ಕಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *