ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಎಂಬಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 30ಲೋಡ್ ಮರಳನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನಿ ಗಿರೀಶ್ ಮೋಹನ್ ನೇತೃತ್ವದ ಅಧಿಕಾರಿಗಳು ಶನಿವಾರ ಸಂಜೆ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡರು. ಸಹಾಯಕ ಅಧಿಕಾರಿ ಮಹದೇವಪ್ಪ, ಪಿಡಬ್ಲ್ಯುಡಿ ಕಿರಿಯ ಎಂಜಿನಿಯರ್ ಅರುಣ್ ಪ್ರಕಾಶ್, ಚಾಲಕ ಕೇಶವ ಮತ್ತಿತರರು ಇದ್ದರು.

