ಬಂಟ್ವಾಳ:ತಾಲ್ಲೂಕಿನ ರಾಯಿ -ಕೊಯಿಲ-ಅರಳ 14ನೇ ವರ್ಷದ ಶಾರದೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಸವಿನ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ.ರಶ್ಮಿತ್ ಶೆಟ್ಟಿ ಕೈತ್ರೋಡಿ, ಕೋಶಾಧಿಕಾರಿಯಾಗಿ ಮೋಹನ ಕೊಯಿಲ ಹಾಗೂ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

