ಮೂಡುಬಿದಿರೆ: ಜನಸಂಘದ ಸ್ಥಾಪಕ ಡಾ.ಶ್ಯಾಂಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನಾಚರಣೆಯನ್ನು ಬಿಜೆಪಿ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ., ಮಂಡಲ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಪೂಜಾರಿ, ಜಿ.ಪಂ.ಸದಸ್ಯ ವಿನೋದ್ ಬೊಳ್ಳೂರು, ತಾ.ಪಂ.ಸದಸ್ಯೆ ರೇಖಾ ಸಾಲ್ಯಾನ್, ಪಕ್ಷದ ಪ್ರಮುಖರಾದ ಕೆ.ಆರ್.ಪಂಡಿತ್, ಬಾಹುಬಲಿ ಪ್ರಸಾದ್, ಭುವನಾಭಿರಾಮ ಉಡುಪ, ಈಶ್ವರ ಕಟೀಲು, ಕೃಷ್ಣರಾಜ ಹೆಗ್ಡೆ, ಲಕ್ಷ್ಮಣ ಪೂಜಾರಿ, ಪ್ರಸಾದ್ ಕುಮಾರ್, ಗೋಪಾಲಕೃಷ್ಣ ಶೆಟ್ಟಿಗಾರ್,ಸುಖೇಶ್ ಶೆಟ್ಟಿ, ದಿನೇಶ್ ಪೂಜಾರಿ, ಉಮೇಶ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
