ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಆಳ್ವ (66) ಅವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಂಟರ ಮಾತೃಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಅವರು ಶ್ರೀನಿವಾಸ ಆಳ್ವರವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ ಆಳ್ವ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ದುಡಿದವರಾಗಿದ್ದು, ಜಪ್ಪು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಮಾತ್ರವಲ್ಲದೆ ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಮಾಜದ ಏಳಿಗೆಗೆ ದುಡಿದವರು. ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಲ್ಲೂ ಅವರು ಸಕ್ರಿಯರಾಗಿ ದುಡಿದಿದ್ದರು ಎಂದು ಅಜಿತ್ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
