ಬಂಟ್ವಾಳ, : ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರುವಾಯಿ ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ನಿವಾಸಿ ಅಕ್ಷತಾ(23) ಆತ್ಮಹತ್ಯೆಗೈದ ಸಿಬ್ಬಂದಿ. ಇಂದು ಬೆಳಗ್ಗೆ ಕೆಲಸಕ್ಕೆಂದು ಪಂಚಾಯತ್ ಗೆ ಮನೆಯಿಂದ ಹೊರಟ ಈಕೆ ಮನೆಯ ಪಕ್ಕದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.ಮ್ರತ ಅಕ್ಷತಾ ಕೆಲವು ಸಮಯದ ಹಿಂದೆ ಎಪೆಂಡಿಸ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ನೊಂದಿದ್ದಳು ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

