ಬಂಟ್ವಾಳ:ತಾಲ್ಲೂಕಿನ ಅಮ್ಟಾಡಿ ಗ್ರಾಮದ ತಲೆಂಬಿಲ ಎಂಬಲ್ಲಿ ಕಳೆದ ಒಂದು ತಿಂಗಳ ಹಿಂದೆ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಇಲ್ಲಿನ ವ್ಯಕ್ತಿಯೊಬ್ಬರು ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ದಿವಂಗತ ಓಡಿಯಪ್ಪ ಪೂಜಾರಿ ಇವರ ಪುತ್ರ ಗೋಪಾಲ ಪೂಜಾರಿ(45) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ತಿಂಗಳ ಹಿಂದೆ ಮಧ್ಯಾಹ್ನ ವೇಳೆಗೆ ಮನೆ ಎದುರಿನ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುವುದಕ್ಕಾಗಿ ಮರ ಏರಿದ್ದು, ಬಳಿಕ ಕಾಲು ಜಾರಿ ಕೆಳಗೆ ಬಿದ್ದು ಸೊಂಟಕ್ಕೆ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದರು.
