ಬಂಟ್ವಾಳ:ತಾಲ್ಲೂಕಿನ ಸಜಿಪಮೂಡ ಗ್ರಾಮದ ಪಟ್ಟುಗುಡ್ಡೆ ಎಂಬಲ್ಲಿ ಈ ಹಿಂದೆ ಮೀಸಲಿಟ್ಟ ಸರ್ಕಾರಿ ಜಮೀನಿನಲ್ಲಿ ಮಾತ್ರ ಹಿಂದೂ ಸ್ಮಶಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಇಲ್ಲಿನ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಭಾರೀ ಪ್ರತಿಭಟನೆ ನಡೆಸಿ ಬಳಿಕ ಮೆರವಣಿಗೆ ನಡೆಸಿದರು.
18btl-protest
ಇಲ್ಲಿನ ಶಿಶು ಮಂದಿರ ಬಳಿ ನೂರಾರು ಮಂದಿ ಮೆರವಣಿಗೆಯಲ್ಲಿ ಬಂದು ಸಜಿಪಮೂಡ ಗ್ರಾಮ ಪಂಚಾಯಿತಿ ಕಛೇರಿಗೆ ಮುತ್ತಿಗೆ ಹಾಕಿ ಸ್ಮಶಾನಕ್ಕಾಗಿ ಮೀಸಲಿಟ್ಟ ಜಮೀನಿನಲ್ಲೇ ಸ್ಮಶಾನ ನಿರ್ಮಾಣ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿದರು.
ಇಲ್ಲದಿದ್ದಲ್ಲಿ ಸಾರ್ವಜನಿಕರೇ ಒಟ್ಟು ಸೇರಿ ಸರ್ಕಾರ ಮೀಸಲಿಟ್ಟ ಜಮೀನಿನಲ್ಲಿ ಸ್ಮಶಾನ ನಿರ್ಮಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. ಇದೇ ವೇಳೆ ತಹಶೀಲ್ದಾರ್ ಪುರಂದರ ಹೆಗ್ಡೆ ಧಾವಿಸಿ ಬಂದು ಪೆÇಲೀಸರ ಉಪಸ್ಥಿತಿಯಲ್ಲಿ ಮಾತುಕತೆ ನಡೆಸಿ, ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಇದೇ ಜಮೀನಿನಲ್ಲಿ ಸ್ಮಶಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಈಗಾಗಲೇ ಮೀಸಲಿಟ್ಟ ಜಮೀನಿನಲ್ಲಿ ಸ್ಮಶಾನ ನಿರ್ಮಿಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದಾಗಿ ಪ್ರತಿಭಟನಾಕಾರರು ಅಲ್ಲೇ ತೆಂಗಿನಕಾಯಿ ಒಡೆಯುವ ಮೂಲಕ ಸ್ಮಶಾನ ನಿರ್ಮಾಣ ಕಾಮಗಾರಿಗೆ ಮತ್ತೆ ಚಾಲನೆ ನೀಡಿದರು.

ಸಮಿತಿ ಅಧ್ಯಕ್ಷ ಉದಯ ಕುಮಾರ್, ಪ್ರಮುಖರಾದ ಜಿತೇಂದ್ರ ಎಸ್.ಕೊಟ್ಟಾರಿ, ಜಗದೀಶ ಶೇಣವ, ಭಾಸ್ಕರ ಧರ್ಮಸ್ಥಳ, ಯಶವಂತ ದೇರಾಜೆ, ಸುಲೋಚನಾ ಜಿ. ಕೆ. ಭಟ್, ವಸಂತ ಶೆಟ್ಟಿ ಕೋಯಮಜಲು, ರಾಮ್‍ದಾಸ್ ಬಂಟ್ವಾಳ, ಸುರೇಶ ಶೆಟ್ಟಿ, ಸರಪಾಡಿ ಅಶೋಕ ಶೆಟ್ಟಿ, ಕ.ಕೃಷ್ಣಪ್ಪ, ಸೀತಾರಾಮ, ಹರೀಶ್, ಜಯಲಕ್ಷ್ಮಿ, ಗೀತಾ ಚಂಚಲಾಕ್ಷ, ನಗ್ರಿ ಶ್ರೀನಿವಾಸ ಭಟ್, ದಕ್ಷಣ್, ಸತೀಶ್ ಮತ್ತಿತರರು ಇದ್ದರು.
ಬಂಟ್ವಾಳ ಡಿವೈಎಸ್‍ಪಿ ಸಿ.ಆರ್.ರವೀಶ್, ಇನ್ಸ್‍ಪೆಕ್ಟರ್ ಬಿ. ಕೆ. ಮಂಜಯ್ಯ, ನಗರಠಾಣಾಧಿಕಾರಿ ನಂದಕುಮಾರ್, ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ, ವಿಟ್ಲ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದರು.

By Suddi9

Leave a Reply

Your email address will not be published. Required fields are marked *