ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಅಸರೆಯಲ್ಲಿ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೆ.ಎಂ.ಸಿ ಅಸ್ಪತ್ರೆ ಮತ್ತು ವೆನ್ಲಾಕ್ ಅಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಕಟೀಲಿನ ಸರಸ್ವತೀ ಸದನದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ರಕ್ತದಾನ ಶಿಬಿರ ನಡೆಯಲಿದೆ, ಶ್ರೀ ದೇವಿ ಸನ್ನಿದಿಯಲ್ಲಿ ಎಲ್ಲಾ ಭಕ್ತರಿಗೂ ರಕ್ತದಾನ ಮಾಡಲು ಅವಕಾಶ ಇದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.
