ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನ 2016-17 ರ ಸಾಲಿನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಸ್ ಮೋಹನನಾರಾಯಣ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು.
ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಬಳಸಿ ತಮ್ಮ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕೆಂದರು. ಕಾಲೇಜಿನ ವಾರ್ಷಿಕ ಸಂಚಿಕೆ ಪ್ರತಿಬಿಂಬವನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲಪ್ರೊ. ಎಂ ರವೀಶ್ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಡಿಜೆವಿವಿ ಸಂಘದ ಹಿರಿಯ ಸದಸ್ಯ ಕೆ .ಹೇಮರಾಜ್ ಉದ್ಘಾಟಕರನ್ನು ಗೌರವಿಸಿದರು. ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪದ್ಮಜಾ ಶೆಟ್ಟಿ, ಪದಾಧಿಕಾರಿಗಳಾದ ಆರ್ನೊಲ್ಡ್ ಪಿಂಟೊ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿಥುನ್ ಅಂಚನ್ ಸ್ವಾಗತಿಸಿದರು. ಪ್ರಣಮ್ಯ ಜೈನ್ ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೀರ್ತನ್ ವಂದಿಸಿದರು. ಕುಮಾರಿ ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.
