ಬಂಟ್ವಾಳ :ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ವರ್ಗಾವಣೆಗೊಳಿಸುವ ಪ್ರಕ್ರಯೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಇಲ್ಲಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಆ.8 ರಂದು ಸೋಮವಾರ ಬೃಹತ್ ಪ್ರತಿಭಟನೆ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗ ನಡೆಯಲಿದೆ. ಜಿಲ್ಲೆಯ ಎಲ್ಲಾ ಶಾಲಾಭಿವೃದ್ದಿ ಸಮಿತಿ ಸದಸ್ಯರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.
