ಬಂಟ್ವಾಳ: ಜನಸಾಮಾನ್ಯರು ತಮ್ಮ ಕುಂದುಕೊರತೆಯನ್ನು ಪರಿಹರಿಸಲು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅಧಿಕಾರಿಗಳೇ ಜನರ ಬಳಿಗೆ ತೆರಳಿ ತ್ವರಿತವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಜನಸಂಪರ್ಕ ಸಭೆಯನ್ನು ಅನುಷ್ಠಾನಕ್ಕೆ ತಂದಿದ್ದು ದ.ಕ. ಜಿಲ್ಲೆಯ ಪ್ರತೀ ತಾಲೂಕು ಮಟ್ಟದಲ್ಲಿ ನಿರ್ದಿಷ್ಟ ದಿನಾಂಕವನ್ನು ಗೊತ್ತುಪಡಿಸಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ.ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ತಾಲೂಕು ಮಟ್ಟದ ಜನಸಂಪರ್ಕ ಸಭೆಯ ಬಳಿಕ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಇಂತಹ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗುವುದು. ಭವಿಷ್ಯದಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಜನಸಂಪರ್ಕ ಸಭೆಯನ್ನು ಆಯೋಜಿಸುವ ಯೋಚನೆ ಇದೆ ಎಂದರು.

ಜನ ಸಾಮಾನ್ಯರಿಗೆ ಅನುಕೂಲವಾಗುವ ದೆಸೆಯಲ್ಲಿ ಬಾಪೂಜಿ ಸೇವಾ ಕೇಂದ್ರವನ್ನು ತೆರೆಯಲಾಗುವುದು. ಈ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸೇರಿದ ನೂರು ಸೇವೆಗಳು ಲಭ್ಯವಾಗಲಿದೆ. ಈ ಹಿಂದೆ ಪಿಂಚಣಿ, ಕಂದಾಯ ಅದಾಲತನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ ಎಂದ ಸಚಿವರು 94ಸಿ ಯೋಜನೆಯಡಿಯಲ್ಲಿ ರಾಜ್ಯದಲ್ಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಹಕ್ಕು ಪತ್ರ ನೀಡಲಾಗಿದೆ. ಪ್ರಸ್ತುತ 94ಸಿಯಡಿ ಅಕ್ಟೋಬರ್ ಅಂತ್ಯದವರೆಗೂ ಹಾಗೂ 94ಸಿಸಿ ಯೋಜನೆಯಡಿ ಆಗಸ್ಟ್ 28ರವರೆಗೆ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

1 (2)

 

2 (1)

3 (1)

5 (1)

6ಪ್ರಮುಖವಾಗಿ ಕಂದಾಯ ಸೇರಿದಂತೆ ಕೆಲವು ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಧ್ಯಮ, ಬಡ ಕುಟುಂಬದಿಂದ ಬಂದ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮಂತೆಯೇ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಬಳಿಗೆ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ ಕಾನೂನಿನ ಚೌಕಟ್ಟಿನಲ್ಲಿ ಪರಿಹರಿಸುವ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದು ಹೇಳಿದ ಸಚಿವರು ಇದರಿಂದಾಗಿ ಅಧಿಕಾರಿಗಳಿಗೆ ಯಾವುದೇ ತೊಂದರೆವಿಲ್ಲ ಎಂದರು.ವಿಧಾನ ಪರಿಷತಿನ ಮುಖ್ಯ ಸಚೇತಕ ಐವಾನ್ ಡಿಸೋಜ ಮಾತನಾಡಿ, ಜನರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹತ್ತಲವು ಕಾನೂನುಗಳಿಗೆ ತಿದ್ದುಪಡಿ ಮಾಡಿದೆ ಎಂದರು. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಅವರು ಮಾತನಾಡಿ, ಜನ ಪಂಪರ್ಕ ಸಭೆಯ ಉದ್ದೇಶವನ್ನು ಸಾರ್ವಜನಿಕರು ಸದುಪಯೋಜಪಡಿಸಿಕೊಳ್ಳಬೇಕು. ಇಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಶೀಘ್ರವೇ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮುಹಮ್ಮದ್, ಮಮತಾಗಟ್ಟಿ, ಶಾಹುಲ್ ಹಮೀದ್, ಮಂಜುಳ ಮಾವೆ, ರವೀಂದ್ರ ಕಂಬಳಿ, ಪದ್ಮಶೇಖರ್ ಜೈನ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಬೂಡಾ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶ್ರೀವಿದ್ಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಎಸ್ಪಿ ಡಾ. ವೇದಮೂರ್ತಿ, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್., ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಉಪಾಧ್ಯಕ್ಷ ಸಂಜೀಪ ಪೂಜಾರಿ, ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ವಂದಿಸಿದರು. ಉದ್ಯೋಗ ಖಾತರಿ ಯೋಜನೆಯ ಸಂಯೋಜಕ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ 94ಸಿ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕು ಪತ್ರ ಸಹಿತ ವಿವಿಧ ಯಜನೆಯಡಿ ಮಂಜೂರಾದ ಸವಲತ್ತುಗಳನ್ನು ಸಚಿವರು ವಿತರಿಸಿದರು.

By Suddi9

Leave a Reply

Your email address will not be published. Required fields are marked *